ಧಾರವಾಡ: ಧಾರವಾಡದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆಂದು ಬಂದಿದ್ದ ಜಮ್ಮು, ಕಾಶ್ಮೀರದ ಯುವಕನಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡಿದೆ. ಸದಿನ್ ಎನ್ನುವ ಯುವಕನಿಗೆ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಸಮಸ್ಯೆ ಕಾಣಿಸಿಕೊಂಡಿತ್ತು. ಈತ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲೆಂದು ಬಂದು ಕೃಷಿ ವಿಶ್ವವಿದ್ಯಾಲಯದಲ್ಲಿ ಉಳಿದುಕೊಂಡಿದ್ದ. ಈತನಿಗೆ ಹೃದಯದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

