ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬನ ಶವವೊಂದು ಕರೆಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ರಾಯನಾಳದ ಬಳಿಯಲ್ಲಿನ ಕೆರೆಯಲ್ಲಿ ನಡೆದಿದೆ.
ಹೌದು..ಬೆಳ್ಳಂಬೆಳಿಗ್ಗೆ ಕೆರೆಯಲ್ಲಿ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರು ಹಾಗೂ ಸಾವಿಗೆ ಕಾರಣ ತಿಳಿದುಬಂದಿಲ್ಲ.

ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತನಿಖೆ ನಡೆಸಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ.
