ಬಾಗಲಕೋಟೆ : ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲ ಒಂದು ಕಡೆಯಾದ್ರೇ, ಇತ್ತ ಕೆಲ ಮುಖಂಡರಿಗೆ ಸಿದ್ದರಾಮಯ್ಯನವರು ಎರಡು ಕ್ಷೇತ್ರದಲ್ಲಿ ನಿಲ್ಲುತ್ತಾರೆಂಬ ಗೊಂದಲಗಳು ಮನೆ ಮಾಡಿದ್ದವು. ಆದ್ರೇ ಇದಕ್ಕೆಲ್ಲಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರೆ ಏಳೆದಿದ್ದಾರೆ. ಒಬ್ಬರಿಗೆ ಒಂದೇ ಕ್ಷೇತ್ರದಿಂದ ಟಿಕೆಟ್ ಎಂದು ಡಿ.ಕೆ.ಶಿ ಹೇಳಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಕೂಡಾ ಒಂದೇ ಕ್ಷೇತ್ರದಲ್ಲಿ ನಿಲ್ಲುತ್ತಾರೆ, ಒಂದು ಕ್ಷೇತ್ರದಿಂದ ಮಾತ್ರ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈಗಾಗಲೇ ಸಿದ್ದರಾಮಯ್ಯನವರೇ ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಅಂತಾ ಹೇಳಿದ್ದಾರೆ, ಫೆಬ್ರವರಿ 2 ರಂದು ಬೆಂಗಳೂರಿನಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲೇ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.
