ಹುಬ್ಬಳ್ಳಿ: ಕೈ ಟಿಕೆಟ್‌ಗಾಗಿ ಅಲ್ಪಸಂಖ್ಯಾತರಿಂದ ರಾಜ್ಯ ಮುಖಂಡರ ಬಳಿ ಒತ್ತಡ ಹೆಚ್ಚಿಸುತ್ತಿರುವ ಕೆಲಸ ಧಾರವಾಡ ಜಿಲ್ಲೆಯಲ್ಲಿ ನಡೆಯುತ್ತಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲೇಬೇಕೆಂದು ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರನ್ನ ನಿರೋಗ ಭೇಟಿ ಮಾಡಿದೆ. ನಿನ್ನೆ ರಾತ್ರಿ ಖಾಸಗಿ ಹೋಟೆಲ್‌ನಲ್ಲಿ ಸಿದ್ದರಾಮಯ್ಯ,

ಡಿ.ಕೆ.ಶಿವಕುಮಾರ್‌ಗೆ ಮುಸ್ಲಿಂ ಸಮುದಾಯದ ಧರ್ಮ ಗುರುಗಳು, ಮೌಲ್ವಿಗಳು, ಸಮಾಜದ ಮುಖಂಡರನ್ನೊಳಗೊಂಡ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದೆ. ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಿಯಾದ್ರೂ ಟಿಕೆಟ್ ನೀಡಬೇಕೆಂದು ಒತ್ತಡ ಹೆಚ್ಚಾಗಿದ್ದು, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಮೇಲೆ ಮುಸ್ಲಿಂ ಸಮುದಾಯ ಕಣ್ಣಿಟ್ಟಿದೆ.

ಇನ್ನೂ ಕಳೆದ ವಾರ ಹುಬ್ಬಳ್ಳಿಯಲ್ಲಿ ಸಭೆ ನಡೆಸಿದ್ದ ಮುಸ್ಲಿಂ ಸಮುದಾಯದ ಮುಖಂಡರು, ಮೌಲ್ವಿಗಳು ಸಭೆಯಲ್ಲಿ ಚರ್ಚೆ ಮಾಡಿ ಒಬ್ಬರಿಗೆ ಟಿಕೆಟ್ ಪಡೆಯಲೇಬೇಕು, ಈ ನಿಟ್ಟಿನಲ್ಲಿ ಏನೇನೂ ಮಾಡಬೇಕೆಂದು ತೀರ್ಮಾನ ಮಾಡಿದರು. ಅದೇ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ನ್ನ ಭೇಟಿ ಮಾಡಿ ಮನವಿ ಸಲ್ಲಿಸಿದರು. ಒಂದು ವೇಳೆ ಟಿಕೆಟ್ ನೀಡದೆ ಹೋದ್ರೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್‌ಗೆ ಪೆಟ್ಟು

ಬೀಳುವುದು ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ ಮುಸ್ಲಿಂ ಸಮುದಾಯದ ಮುಖಂಡರು, ಮೌಲ್ವಿಗಳು ಎನ್ನಲಾಗಿದೆ. ಇದರಿಂದಾಗಿ ಕೈ ಹೈಕಮಾಂಡ ಮತ್ತೆ ಟಿಕೆಟ್ ಹಂಚಿಕೆ ಮಾಡುವುದು ಕಗ್ಗಂಟಾಗಿದೆ.