Breaking News

ಹುಬ್ಬಳ್ಳಿಯಲ್ಲಿ ಜೆಡಿಎಸ್ ನತ್ತ ಮುಖ ಮಾಡಿದ, ಬಿಜೆಪಿ ಹಾಗೂ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಗಳು

ಹುಬ್ಬಳ್ಳಿ; ಧಾರವಾಡ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಸಾಲು ಸಾಲು ಪಟ್ಟಿ ಸಿದ್ದವಾಗಿದೆ. ಪ್ರತಿ ಕ್ಷೇತ್ರದಲ್ಲಿ ಒಂದೊಂದು ಪಕ್ಷದಿಂದ ಆರರಿಂದ ಏಳು ಅಭ್ಯರ್ಥಿಗಳು ಪೈಪೋಟಿಯಲ್ಲಿದ್ದಾರೆ. ಆದ್ರೇ ಇದರ ನಡುವೆ ಶತಾಯ ಗತಾಯ ಈ ಭಾರಿ ಚುನಾವಣೆಯಲ್ಲಿ ಗೆದ್ದು ಬೀಗಬೇಕೆಂಬ ಆಸೆ ಪ್ರತಿಯೊಬ್ಬ ಟಿಕೆಟ್ ಆಕಾಂಕ್ಷಿಯಲ್ಲೂ ಇದೆ. ಇದರ ಬೆನ್ನಲ್ಲೇ ಟಿಕೆಟ್ ಪಡೆಯದೇ ವಂಚಿತರಾಗುವ ಕೆಲವರು, ಇತ್ತ ಜೆಡಿಎಸ್ ಬಾಗಿಲು ತಟ್ಟಿದ್ದಾರೆ.

ಇದಕ್ಕಾಗಿ ಹುಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಕಾಂಗ್ರೇಸ್ ಪಕ್ಷದ ಪಶ್ಚಿಮ ಕ್ಷೇತ್ರದ ಅಭ್ಯರ್ಥಿಗಾಗಿ ದೀಪಕ್ ಚಿಂಚೂರಿ, ಇನ್ನೂ ಮತ್ತೊರ್ವ ಅಭ್ಯರ್ಥಿ ಗ್ರಾಮೀಣ ಕ್ಷೇತ್ರಕ್ಕಾಗಿ ಇಸ್ಮೈಲ್ ತಮಟಗಾರ ಸೇರಿದಂತೆ ಕೆಲವರು ಜೆಡಿಎಸ್ ಪಕ್ಷದ ನಾಯಕ ಕುಮಾರಸ್ವಾಮಿಯನ್ನು ಭೇಟಿ ಮಾಡಿದ್ದಾರೆಂದು ಹೇಳಲಾಗಿದೆ. ಈ ಒಂದು ಬೆಳವಣಿಗೆಯಿಂದ ಈಗಾಗಲ್ಲೆ ಧಾರವಾಡ ಜಿಲ್ಲೆಯ ಚುನಾವಣೆ ಕಾವು ಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ.  

Share News

About BigTv News

Check Also

ಜಮೀನು ವಿವಾದ: ಯುವಕನ ಕೊಲೆ, ನಾಲೆಗೆ ಶವ ಎಸೆದ ಆರೋಪ

ಮಂಡ್ಯ: ಜಮೀನು ವಿವಾದ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ 30 ವರ್ಷದ ನವೀನ್ ಎಂಬ ಯುವಕನನ್ನು ಕೊಲೆ ಮಾಡಿ ಶವವನ್ನು …

Leave a Reply

Your email address will not be published. Required fields are marked *