Breaking News

11 ನೇ ಒಣಮೆಣಸಿನಕಾಯಿ ಮೇಳ ಉದ್ಘಾಟನೆ

ಹುಬ್ಬಳ್ಳಿ ಜನೇವರಿ 20 ರಿಂದ 22 ರವರೆಗೆ 3 ದಿನಗಳ ಕಾಲ ಒಣಮೆಣಸಿನಕಾಯಿ ಮೇಳ ನಡೆಯಲಿದೆ. ಒಣಮೆಣಸಿನಕಾಯಿ ಮೇಳದಿಂದ‌ ಮೆಣಸಿನಕಾಯಿ ಬೆಳೆದ ರೈತರಿಗೆ ಯೋಗ್ಯ ಮಾರುಕಟ್ಟೆ ದೊರೆತಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಹೇಳಿದರು‌.

ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ತೋಟಗಾರಿಕೆ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಕುಂದಗೋಳ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಹುಬ್ಬಳ್ಳಿ ಇವುಗಳ ಸಹಯೋಗದಲ್ಲಿ ಆಯೋಜಿಸಲಾದ 11 ನೇ ಒಣಮೆಣಸಿನಕಾಯಿ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಮೇಳ ನಡೆಯುವುದರಿಂದ ರೈತರಿಗೆ ಅನುಕೂಲವಾಗಲಿದೆ. ಕಳೆದ ಎರಡು ವರ್ಷ ಕರೋನಾ ಮಹಾಮಾರಿಯಿಂದಾಗಿ ಮೇಳ ನಡೆದಿರಲಿಲ್ಲ. ಕುಂದಗೋಳ, ಬ್ಯಾಡಗಿ ಭಾಗದ ರೈತರು ಹೆಚ್ಚು ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆಯುವ ಮೆಣಸಿನಕಾಯಿಗೆ ರಾಷ್ಟ್ರದಾದ್ಯಂತ ಬಹಳ ಬೇಡಿಕೆಯಿದೆ. ಬೇರೆ ಬೇರೆ ಉತ್ಪನ್ನಗಳನ್ನು ಬೆಳೆಯುವುದರಿಂದ ಹೆಚ್ಚಿನ ಮಹತ್ವವನ್ನು ಪಡೆದುಕೊಳ್ಳಲಿವೆ. ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಗೆ ಹೆಚ್ವಿನ ಒತ್ತು ನೀಡಿ, ಹೊಸ ಹೊಸ ಆಧುನಿಕ ಪ್ರಯೋಗಗಳು ಆಗಬೇಕಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಉತ್ತರ ಕನ್ನಡ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು ಈ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ವಿನಯ ಜವಳಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್. ಗಿರೀಶ, ಮಂಡಳಿಯ ಪ್ರಧಾನ ವ್ಯವಸ್ಥಾಪಕರಾದ ರವೀಂದ್ರ ಹಕಾಟಿ, ಚಿದಾನಂದಪ್ಪ ಪಿ.ಜಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಜಯಕುಮಾರ ರ್ಯಾಗಿ, ವಿವಿಧ ಜಿಲ್ಲೆಗಳ ರೈತರು, ಗ್ರಾಹಕರು, ಸಾರ್ವಜನಿಕರು ಭಾಗವಹಿಸಿದ್ದರು.

Share News

About BigTv News

Check Also

Featured Video Play Icon

ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ: ಕಮೀಷನರ್ ರೇಣುಕಾ ಸುಕುಮಾರ್..!

ಹುಬ್ಬಳ್ಳಿ: ಬಿವ್ಹಿಬಿ ‌ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ‌ಸುಕುಮಾರ ಬಿಚ್ಚಿಟ್ಟಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page