ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ನವಲಗುಂದ ರಸ್ತೆಯಲ್ಲಿ ಪೆಟ್ರೋಲ್ ಟ್ಯಾಂಕರ್ ವೊಂದು ಏಕಾಏಕಿ ವ್ಯಕ್ತಿಯೋರ್ವನಿಗೆ ಡಿಕ್ಕಿ ಪಡಿಸಿದ ಪರಿಣಾಮ ಸ್ಥಳದಲ್ಲಿಯೇ ಅಸುನೀಗಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ನೂರಸಾಬ್ ಕಿರೇಸೂರ ಎಂಬ ವ್ಯಕ್ತಿಯೇ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಜರುಗಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೃತ ಕುಟುಂಬಸ್ಥರ ಆಕ್ರಂದಣ ಮುಗಿಲು ಮುಟ್ಟಿದ್ದು ಕಂಡು ಬಂದಿತ್ತು. ಇನ್ನೂ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಂತೆ ಒಂದು ಗಂಟೆ ಕಲ ರಸ್ತೆ ತಡೆ ನಡೆಸಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಹಶಿಲ್ದಾರ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಈ ಮುಖ್ಯ ರಸ್ತೆಯಲ್ಲಿ ರಸ್ತೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.