Breaking News

ನಿಧಿ ಹೆಸರಲ್ಲಿ ವಂಚನೆ‌ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ

ಧಾರವಾಡ: ಜನರಿಗೆ ನಿಧಿಯಾಸೆ ತೋರಿಸಿ ವಂಚನೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮೂಲದ ನಾಗಯ್ಯ ಹಾಗೂ ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮ ಮಾರುತಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಜನರಿಗೆ ನಿಮ್ಮ ಮನೆಯಲ್ಲಿ ನಿಧಿ ಇದೆ. ಅದನ್ನು ನಾವು ಹುಡುಕಿಕೊಡುತ್ತೇವೆ ಎಂದು ನಂಬಿಸಿ, ಇದಕ್ಕೊಂದು ದೊಡ್ಡ ಪೂಜೆ ಮಾಡಬೇಕು ಎಂದು ಹೇಳಿ ಅವರಿಂದ ಹಣ ಪಡೆದು ವಂಚನೆ ಮಾಡಿ ಪರಾರಿಯಾಗುತ್ತಿದ್ದರು.

ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಇಂತದ್ದೊಂದು ಘಟನೆ ಇತ್ತೀಚೆಗೆ ನಡೆದಿತ್ತು. ಇದರ ಮಾಹಿತಿ ಪಡೆದಿದ್ದ ನವಲಗುಂದ ಠಾಣೆಯ ಪೊಲೀಸರು ಇಬ್ಬರು ಖದೀಮರ ಮೇಲೆ ಕಣ್ಣಿಟ್ಟು ಈಗ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Share News

About Shaikh BigTv

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *