ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 229ನೇ ಹುತಾತ್ಮ ದಿನಾಚರಣೆ ಅಂಗವಾಗಿ ಪತ್ರಿಕೋದ್ಯಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 26ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಯುಕ್ತ ಕರ್ನಾಟಕದ ಷಣ್ಮುಖ ಕೋಳಿವಾಡ, ಟಿವಿ 5 ಕನ್ನಡ ವರದಿಗಾರರಾದ ಯಲ್ಲಪ್ಪ ಸೋಲಾರಗೊಪ್ಪ, ಟಿವಿ 9 ವರದಿಗಾರರಾದ ಶಿವಕುಮಾರ್ ಪತ್ತಾರ, ಪ್ರಜಾವಾಣಿಯ ಗೋವಿಂದ ಜವಳಿ, ಸಂಯುಕ್ತ ಕರ್ನಾಟಕದ ವಿನಾಯಕ ದೇಶಪಾಂಡೆ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿಯ ಗಣನೀಯ ಸೇವೆಯನ್ನು ಪರಿಗಣಿಸಿ ರಾಯಣ್ಣ ಪ್ರಶಸ್ತಿ-2023 ನೀಡಲು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇನ್ನೂ ಸಾಮಾಜಿಕ ಸೇವೆ, ವೈದ್ಯಕೀಯ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಸನ್ಮಾನಿಸಿ ಗೌರವ ಸೂಚಿಸಲಾಗುತ್ತದೆ.