ಕುಂದಗೋಳ ತಾಲೂಕಿಗೆ ವಿವಿಧ ಕಾರ್ಯಕ್ರಮ ಹಾಗೂ ವಿಜಯ ಯಾತ್ರಾ ಕಾರ್ಯಕ್ರಮ ಉದ್ಘಾಟನೆ ಹಿನ್ನೆಲೆ ಜನೆವರಿ 28 ಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಆಗಮಿಸುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮರಾಠ ಭವನ ಕುಂದಗೋಳ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರು ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕರ್ತರು ಯಾರು ಯಾವ ಜವಾಬ್ದಾರಿಯನ್ನು ನಿಭಾಯಿಸುವುದು ಎಂದು ತಿಳಿಸಿದರು.ನಂತರ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಆಡಳಿತ ತರುವ ಪ್ರಯತ್ನ ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖರು ಕುಂದಗೋಳ ವಿಧಾನ ಸಭಾ ಕ್ಷೇತ್ರದ ಪ್ರಮುಖ ಪದಾಧಿಕಾರಿಗಳ ಉಪಸ್ಥಿತರಿದ್ದರು.
