ಧಾರವಾಡ : 74 ನೇ ಗಣರಾಜ್ಯೋತ್ಸವ ನಿಮಿತ್ತ ಗುರುವಾರ ಧಾರವಾಡ ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅವರಿಂದ ಗಾಂಧಿಜೀ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಲಾಯಿತು.
ಇನ್ನು ಸಚಿವ ಹಾಲಪ್ಪ ಬಸಪ್ಪ ಆಚಾರ್ ಪಥಸಂಚಲನದ 9 ತಂಡಗಳ ಪರಿವೀಕ್ಷಣೆ ನಡೆಸಿದ ನಂತರ ತಂಡಗಳು ಅವರಿಗೆ ಗೌರವ ವಂದನೆಯನ್ನು ಸಲ್ಲಿಸಿದವು. ಧ್ವಜಾರೋಹಣದಲ್ಲಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರು, ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಧ್ವಜಾರೋಹಣದ ವೀಕ್ಷಣೆಗಾಗಿ ನಗರದ ಹಲವು ಶಾಲಾ-ಕಾಲೇಜುಗಳಿಂದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಗಮಿಸಿದ್ದರು. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ನಿಯೋಜಿಸಲಾಗಿತ್ತು.