ಕುಂದಗೋಳ : ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದಲ್ಲಿ ಸಂಭವಿಸಿದೆ.
ಹೌದು ! ಕುಬಿಹಾಳ ಗ್ರಾಮದ ಈರಪ್ಪ ಮಂಟೂರ ಎಂಬಾತ ಕಳೆದ ಬುಧವಾರ ಹಂಚಿನಾಳ ಗ್ರಾಮದ ಸರಕಾರಿ ಶಾಲೆಯ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಇನ್ನೂ ಮೃತ ಈರಪ್ಪ ಮಂಟೂರ ಗ್ರಾಮದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಉದ್ದೇಶದಿಂದ ಕುಬಿಹಾಳ ಗ್ರಾಮದಿಂದ ಕುಂದಗೋಳ ಪಟ್ಟಣದ ತಹಶೀಲ್ದಾರರ ಕಚೇರಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ.