Breaking News

ಪಕ್ಷದಲ್ಲಿ ಭಿನ್ನಮತ ಇಲ್ಲ, ಅಭಿವೃದ್ಧಿ ನಮ್ಮ ಗುರಿ’

ಹುಬ್ಬಳ್ಳಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನಮ್ಮೆಲ್ಲರಿಗೂ ಪಕ್ಷದ ಬೆಳವಣಿಗೆ ಮುಖ್ಯ. ಎಲ್ಲರೂ ಭಿನ್ನಮತ ಮರೆತು ಪಕ್ಷಕ್ಕಾಗಿ ಶ್ರಮಿಸಬೇಕು. ಎಲ್ಲ ಕಡೆಯೂ ನಮಗೆ ಒಂದೊದು ಗುರಿ ಇದೆ. ಅದನ್ನು ತಲುಪಲು ಶ್ರಮಿಸಿಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೆಚ್ಚಿನ ನಾಯಕ ಅಮಿತ್ ಶಾ ಇಂದು ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಅಧಿಕೃತ ಕಾರ್ಯಕ್ರಮಗಳಾದ ಎಫ್‌ಎಸ್ಎಲ್‌ಯು ಲ್ಯಾಬ್ ಅಡಿಗಲ್ಲು, ಬಿವಿಬಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕುಂದಗೋಳದಲ್ಲಿ ಬೂತಮಟ್ಟದ ವಿಜಯಸಂಕಲ್ಪ ಸಮಾವೇಶ ನಡೆಯಲಿದೆ ಎಂದರು.

ಇನ್ನು ಎಂಕೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಬಳಿಕ ಬೆಳಗಾವಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದೆ. ಕಿತ್ತೂರು ಕರ್ನಾಟಕ ನಮ್ಮ ಭದ್ರ ಕೋಟೆ, ಈ ಕಾರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಮಗ್ರ ಕರ್ನಾಟಕದಲ್ಲಿ ಅಮಿತ್ ಶಾ ಕಳೆದ ಚುನಾವಣೆಯಲ್ಲಿ ಓಡಾಡಿದ್ದರು. ಮೊನ್ನೆ ಕೂಡ ಮಂಡ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಶಾ ಚಾಲನೆ ನೀಡುತ್ತಿದ್ದಾರೆ. ಜನಪ್ರಿಯತೆ ಅವರಿಗಿದ್ದು, ಈ ಸಲವೂ ರಾಜ್ಯಾದ್ಯಂತ ಓಡಾಡಲಿದ್ದಾರೆ ಎಂದರು.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *