Breaking News

ಮಹೋತ್ಸವಕ್ಕೆ ಚಾಲನೆ: ಜ್ಯೋತಿಯ ಮೂಲಕ ಉದ್ಘಾಟನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೆಎಲ್‌ಇ ಬಿವಿಬಿ ತಾಂತ್ರಿಕ ವಿಶ್ವವಿದ್ಯಾಲಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಹೌದು.. ವಿದ್ಯಾನಗರದ ಬಿವಿಬಿ ಆವರಣದಲ್ಲಿ ಆಯೋಜಿಸಲಾಗಿದ್ದ ಅಮೃತ ಮಹೋತ್ಸವ ಹಾಗೂ ಪ್ರಭಾಕರ ಕೋರೆ ಅಭಿನಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ನೂ ಬ್ರಹ್ಮ ಋಷಿ ಗುರುದೇವ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡದ ಬಳಿಕ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವ ಸಮರ್ಪಣೆ ಮಾಡಲಾಯಿತು. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸನ್ಮಾನಿಸಿ ಜನ್ಮದಿನದ ಶುಭಾಶಯ ಕೋರಿದರು.

ಇನ್ನೂ ವೇದಿಕೆಯ ಮೇಲೆ ಉಪಸ್ಥಿತರಿರುವ ಶಂಕರಪಾಟೀಲ ಮುನೇನಕೊಪ್ಪ, ಬಿ.ಎಸ್.ಯಡಿಯೂರಪ್ಪ, ಮುರಗೇಶ ನಿರಾಣಿ, ಬಸವರಾಜ ಹೊರಟ್ಟಿ ಅವರಿಗೆ ಗೌರವ ಸಲ್ಲಿಸಲಾಯಿತು.

Share News

About BigTv News

Check Also

ಜಮೀನು ವಿವಾದ: ಯುವಕನ ಕೊಲೆ, ನಾಲೆಗೆ ಶವ ಎಸೆದ ಆರೋಪ

ಮಂಡ್ಯ: ಜಮೀನು ವಿವಾದ ಹಾಗೂ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ 30 ವರ್ಷದ ನವೀನ್ ಎಂಬ ಯುವಕನನ್ನು ಕೊಲೆ ಮಾಡಿ ಶವವನ್ನು …

Leave a Reply

Your email address will not be published. Required fields are marked *