ಧಾರವಾಡ: ಕುಂದಗೋಳ ಪಟ್ಟಣದಲ್ಲಿ ನಡೆಯಲಿರುವ ಬೃಹತ್ ರೋಡ್ ಶೋದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧಾರವಾಡದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು. ಧಾರವಾಡದಲ್ಲಿ ಫೋರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ನಂತರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಮಿತ್ ಶಾ ಅವರು, ಕೃಷಿ ವಿಶ್ವವಿದ್ಯಾಲಯದಲ್ಲೇ ಭೋಜನ ಸವಿದರು. ಅಲ್ಲಿಂದ ಎತ್ತಿನಗುಡ್ಡದ ಸರ್ಕಾರಿ ಶಾಲಾ ಆವರಣದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಹೆಲಿಪ್ಯಾಡ್‌ಗೆ ತೆರಳಿದ ಅವರು, ಹೆಲಿಕಾಪ್ಟರ್ ಮೂಲಕ ಕುಂದಗೋಳಕ್ಕೆ ಪ್ರಯಾಣ ಬೆಳೆಸಿದರು. ಇವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಹಾಲಪ್ಪ ಆಚಾರ್ ಸಾಥ್ ನೀಡಿದರು.
