ಹುಬ್ಬಳ್ಳಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಹಳೇ ಹುಬ್ಬಳ್ಳಿಯ ಪೊಲೀಸರು ಯಶಸ್ವಿಯಾಗಿದ್ದಾರೆ
ಹುಬ್ಬಳ್ಳಿಯ ಆನಂದ ನಗರದಲ್ಲಿನ ಕುಷ್ಠರೋಗ ಆಸ್ಪತ್ರೆಯ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಯತಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಶಿವು ಬನ್ನಿಕೊಪ್ಪ ನೇತೃತ್ವದ ತಂಡ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.
ಆರೋಪಿಗಳಿಂದ 722 ಗ್ರಾಂ ಗಾಂಜಾ ವಶಕ್ಕೆ ಪಡೆದು ಆರೋಪಿಗಳ ಮೇಲೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು,ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಕ್ಕೆ ಕಮೀಷನರ್ ರಮನ್ ಗುಪ್ತಾ ಶ್ಲಾಘನೀಯ ವ್ಯಕ್ತಪಡಿಸಿದ್ದಾರೆ.