ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೊತ್ತಿಲ್ಲ. ಈಗಾಗಲೇ ಕಾನೂನಾತ್ಮಕ ಹೋರಾಟವಾಗಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಟ್ರಿಮಿನಲ್ ರಚನೆಯಾಗಿ ಅದರ ಪರಿಶೀಲನೆ ಸಹ ಆಗಿದೆ. ಅಲ್ಲದೇ ತೀರ್ಪು ಕೂಡ ನೀಡಿದೆ. ಮಹದಾಯಿ ಯೋಜನೆ ಅನುಷ್ಠಾನವನ್ನು ಕೇಂದ್ರ ಸರ್ಕಾರದ 2016ರಲ್ಲಿ ಡಿಪಿಆರ್ ನೀಡಲಾಗಿತ್ತು. ಸದ್ಯ ಡಿಪಿಆರ್ ಸಹ ಅನುನತಿ ನೀಡಿದೆ. ಕಾನೂನು ಹೋರಾಟವಾಗಿಯೇ ಇದೆಲ್ಲ ಆಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹದಾಯಿಯ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಅಲ್ಲದೇ ಈಗಾಗಲೇ ಕಾನೂನಾತ್ಮಕ ಹೋರಾಟದ ರೂಪುರೇಷೆಗಳನ್ನು ಪರಿಶೀಲನೆ ಮಾಡಿಯೇ ನಿರ್ಧಾರವನ್ನು ಕೊಟ್ಟಿದೆ ಎಂದರು.
ಎಚ್.ವಿಶ್ವನಾಥ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಎಚ್.ವಿಶ್ವನಾಥ್ ಅವರ ಹೇಳಿಕೆಗೆ ನಾನು ಯಾವತ್ತೂ ಪ್ರತಿಕ್ರಿಯಿಸಿಲ್ಲ. ಅವರು ಪದೇ ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದ ಅವರು, ಸಿಎಂ ಹಾಗೂ ಮಾಜಿ ಸಿಎಂ ಪುಡಿರೌಡಿಗಳಂತೆ ವರ್ತಿಸುತ್ತಾರೆ ಎಂಬ ಎಚ್.ವಿಶ್ವನಾಥ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದಿನ ವಿಷಯ ಕೈಗೆತ್ತಿಕೊಂಡರು.
ಇನ್ನೂ ಫೆಬ್ರವರಿ 06ರಂದು ಪ್ರಧಾನಿ ಮೋದಿ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಸೇರಿದಂತೆ ಬೆಂಗಳೂರು ಹಲವಾರು ಕಾರ್ಯಕ್ರಮಗಳಲ್ಲಿ ಮೋದಿಯವರು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಸಿ.ಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಕುರಿತ ಮಾಧ್ಯಮದ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಯಾವುದೇ ಪ್ರತಿಕ್ರಿಯೆ ನೀಡದೇ ಮುನ್ನಡೆದರು.