Breaking News

ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ಅನುದಾನ

ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ, ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಹಾಗೂ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹೃದಯ ಪೂರ್ವಕ ಧನ್ಯವಾದಗಳು. ಈ ಅನುದಾನವೂ ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. …

Leave a Reply

Your email address will not be published. Required fields are marked *