Breaking News

ಗೋಕುಲ್ ಠಾಣೆಯ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಖತರ್ನಾಕ್ ಕಳ್ಳರು ಅರೆಸ್ಟ್

ಹುಬ್ಬಳ್ಳಿ : ಧಾರವಾಡ ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಮನೆ ಹಾಗೂ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹೆಡೆಮುರಿಕಟ್ಟುವಲ್ಲಿ ಹುಬ್ಬಳ್ಳಿಯ ಗೋಕುಲ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರನ್ನು ತಡೆದು ಪರಿಶೀಲನೆ ಮಾಡಿದಾಗ ನಾಲ್ವರು ಕಳ್ಳರು ಖಾಕಿ ಬಲೆಗೆ ಬಿದ್ದಿದ್ದಾರೆ.

ಹು-ಧಾ ನಗರದ 8 ಕಡೆಗಳಲ್ಲಿ, ಬೆಳಗಾವಿ ಶಹರದಲ್ಲಿ 1 ಕಡೆ, ಕೊಪ್ಪಳ ಜಿಲ್ಲೆಯಲ್ಲಿ 1 ಕಡೆ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಸದ್ಯ ಆರೋಪಿಗಳಿಂದ 300 ಗ್ರಾಂ ಬಂಗಾರ, 2 ಲಾರಿ ಹಾಗೂ ಕಾರು ಸೇರಿದಂತೆ ಒಟ್ಟು 53,10,000 ಮೌಲ್ಯದ ಸಾಮಗ್ರಿಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About Shaikh BigTv

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *