Breaking News

ಸಿಡಿ ವಿಚಾರಕ್ಕೆ ಅಮಿತ್ ಶಾ ಭೇಟಿಯಾದ ಸಾಹುಕಾರ್

ನವದೆಹಲಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದಾರೆ.

ಅಲ್ಲದೇ ಸಿಬಿಐ ತನಿಖೆಗೆ ವಹಿಸುವುದರಿಂದ ಆಗುವ ಸಾಧಕ ಬಾಧಕಗಳ ಬಗ್ಗೆಯೂ ವಿವರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ಬಿಜೆಪಿ ನಾಯಕರು ಸೇರಿದಂತೆ 100ಕ್ಕೂ ಹೆಚ್ಚು ಜನರ ಸಿಡಿಗಳಿದ್ದು, ಸಿಡಿ ಮೂಲಕವೇ ರಾಜಕೀಯ ನಾಯಕರನ್ನು ನಿಯಂತ್ರಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಪ್ರಕರಣ ಸಿಬಿಐಗೆ ವಹಿಸಿದರೆ ಲಾಭವಾಗಲಿದೆ ಎಂಬುದನ್ನು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಮನವಿಗೆ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಇನ್ನಷ್ಟು ಮಾಹಿತಿ ಪಡೆದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಮಂಡ್ಯ| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

ಪಾಂಡವಪುರದ ಪ್ರಕಾಶ ಬಿನ್‌ ಮುದ್ದೇಗೌಡ ಎಂಬಾತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ನಗರದ 2ನೇ …

Leave a Reply

Your email address will not be published. Required fields are marked *