ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ 76,77,78,79ರ ಪ್ರದೇಶದಲ್ಲಿ ಸಾಮೂಹಿಕ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಹೌದು, ನಗರದಲ್ಲಿಂದು ಸ್ವಚ್ಚತಾ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿರುವ ಪಾಲಿಕೆ ಅಧಿಕಾರಿಗಳು ಪ್ರತಿದಿನ ಸಾಮೂಹಿಕ ಸ್ವಚ್ಚತಾ ಕಾರ್ಯ ಮಾಡುತ್ತಿದ್ದಾರೆ.ಇನ್ನೂ ಸಾರ್ವಜನಿಕರು ಸಹ ಇದಕ್ಕೆ ಸಹಕಾರ ಮಾಡಿದ್ದು ಸ್ವಚ್ಚತಾ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
