ಹುಬ್ಬಳ್ಳಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಇನ್ನೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಗಿನ ಜಾವ 4-30ಕ್ಕೆ ನಡೆದಿದೆ.
ಗೋಕುಲ್ ಕಡೆಯಿಂದ ಹಳೇ ಬಸ್ ನಿಲ್ದಾಣದತ್ತ ಬರುತ್ತಿದ್ದ ಕಾರಿಗೆ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಕಾರಿಗೆ ಬೈಕ್ ಅಡ್ಡ ಬಂದು ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನು ಕಾರಿನಲ್ಲಿದ್ದ ಇಬ್ಬರಿಗೂ ಕೂಡಾ ಗಂಭೀರ ಗಾಯವಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾಣಿಸಿದ್ದು,ಮೃತಪಟ್ಟ ವ್ಯಕ್ತಿ ಯಾರು ಎಲ್ಲಿಯವ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.