ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ
ಮಾಡಿಕೊಂಡು ಹೋದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.
ಈರಣ್ಣ ಹತ್ತಿಕಟಗಿ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ ಎಂದು ಗೊತ್ತಾಗಿದೆ. ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮನ ಜಾತ್ರೆ ಇದ್ದ ಕಾರಣ ಈರಣ್ಣ ತಮ್ಮ ಬೈಕ್‌ನ್ನು ಮಸೂತಿ ಅವರ ಮನೆ ಮುಂದೆ ನಿಲ್ಲಿಸಿ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಆ ಬೈಕ್ ಎಗರಿಸಿಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ಈರಣ್ಣ ಅವರು ಗರಗ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಲು ಮುಂದಾಗಿದ್ದಾರೆ.