ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಸನ್ಮಾನ ಮಾಡಲಾಯಿತು.ಚನ್ನಬಸವೇಶ್ವರ ದೇವಸ್ಥಾನದ ಸೇವಾ ಸಮಿತಿಯವರು ಹಮ್ಮಿಕೊಂಡ ನಾಟಕ ಪ್ರದರ್ಶನದ ಉದ್ಘಾಟನೆಯನ್ನು ಕುಂದಗೋಳ ಮತಕ್ಷೇತ್ರದ ಶಾಸಕಿ ಕುಸುಮಾವತಿ ಚ ಶಿವಳ್ಳಿಯವರು ನೆರವೇರಿಸಿದರು.ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ನಾಟಕಗಳು ಮರೆ ಮಾಚುತ್ತಿವೆ ಆದ್ದರಿಂದ ಎಲ್ಲರೂ ನಾಟಕ ನೋಡಬೇಕು ಎಂದು ತಿಳಿಸಿದರು.
