ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ಮಹಾರಾಷ್ಟ್ರ ಮೂಲದ ಪೇಶ್ವೆ ಎಂದು ಅಪಮಾನಗೊಳಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯವಾಗಿದೆ ಎಂದು ಬಿಜಪಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಅವಮಾನಿಸುವ ಮೂಲಕ ಕುಮಾರಸ್ವಾಮಿಯವರು ಸಮಸ್ತ ಮಾನವ ಜನಾಂಗಕ್ಕೆ ಅಪಮಾನ ಮಾಡಿದ್ದಾರೆ. ಒಂದು ವಾರದೊಳಗೆ ಅವರು ಹೇಳಿಕೆ ಪಡೆಯಬೇಕು. ಇಲ್ಲದಿದ್ದರೆ ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಶವಯಾತ್ರೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗಣೇಶ ಅಮರಾವತಿ, ಸಹದೇವ ಚಾಕಲಬ್ಬಿ ಉಪಸ್ಥಿತರಿದ್ದರು.