ಹುಬ್ಬಳ್ಳಿ: ಯುವಕನೊಬ್ಬ ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ರಾತ್ರಿ 2-30 ರ ಸುಮಾರಿಗೆ ನಡೆದಿದೆ.
ಆನಂದ ನಗರದ ನಿವಾಸಿಯಾದ ಸಲಿಂ ಎಂಬ ಯುವಕ ನಿನ್ನೆ ತಡರಾತ್ರಿ ಮನೆಗೆ ಹೋಗುತ್ತಿದ್ದಾಗ ಇಂದಿರಾ ನಗರದ ಬಳಿ ಇರುವ ರಿಲಾಯನ್ಸ್ ಪೆಟ್ರೋಲ್ ಪಂಪ್ ಬಳಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸಲೀಮ್ ತಲೆಗೆ ಗಂಭೀರ ಏಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಮೃತಪಟ್ಟ ಸಲಿಂ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಿ,ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.