Breaking News

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರಿಸಡಲು ಒತ್ತಾಯಹುಬ್ಬಳ್ಳಿ:..

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶರಣಪ್ಪ ಕೊಟಗಿ ಒತ್ತಾಯಿಸಿದರು.ನಗರದಲ್ಲಿ ಬುಧವಾರ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಗುಲಾಬಿ ವನದಲ್ಲಿದ್ದ ಶ್ರೀ ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ತೆರವುಗೊಳಿಸಿದ್ದು, ಗುಲಾಬಿ ವನದಲ್ಲಿದ್ದ ಪುತ್ಥಳಿಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದ ಗೇಟ್ ಬಳಿ ಸ್ಥಾಪಿಸಬೇಕು, ಅಲ್ಲದೇ ಗುಲಾಬಿ ವನದಲ್ಲಿ ಅತೀ ವಿಸ್ತಾರವಾದ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಸತೀಶ್ ಮೆಹರವಾಡೆ, ಗಂಗಾಧರ ದೊಡ್ಡವಾಡ, ಪಾರಸಮೈಲ್ ಜೈನ್, ಮಹೇಶ ದಾಬಡೆ, ಮೋಹನ ಹೊಸಮನಿ ಸೇರಿದಂತೆ ಉಪಸ್ಥಿತರಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *