Breaking News

ಐತಿಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ

ಧಾರವಾಡ ತಾಲೂಕಿನ ಐತಿಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಶ್ರೀ ಮ.ನಿ.ಪ್ರ.ಚನ್ನಬಸವ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳಿಗೆ 88 ವರ್ಷ ವಯಸ್ಸಾಗಿತ್ತು.

ಕಳೆದ ಹಲವು ದಿನಗಳಿಂದ ಸ್ವಾಮೀಜಿಗಳು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪೂಜ್ಯರ ಅಂತ್ಯಕ್ರಿಯೆ ನಾಳೆ ಸೋಮವಾರ ಬೆಳಿಗ್ಗೆ 12 ಗಂಟೆಗೆ ಗರಗ ಗ್ರಾಮದ ಶ್ರೀಮಠದ ಆವರಣದಲ್ಲಿ ನಡೆಯಲಿದೆ. ಈ ಅಂತ್ಯಕ್ರಿಯೆಗೆ ನಾಡಿನ ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.

ಕಲ್ಮಠದ ಜವಾಬ್ದಾರಿ ಹೊತ್ತುಕೊಂಡಿದ್ದ ಚನ್ನಬಸವ ಸ್ವಾಮೀಜಿ ಮಠದ ಏಳೆಗಾಗಿ ಹಗಲಿರುಳು ಶ್ರಮಿಸಿದ್ದರು. ಅಲ್ಲದೇ ಅನ್ನದಾನ ಹಾಗೂ ವಿದ್ಯಾದಾನಕ್ಕೆ ಒತ್ತುಕೊಟ್ಟು ಎಲೆಮರೆಯ ಕಾಯಿಯಂತೆ ಸಮಾಜ ಸೇವೆ ಮಾಡಿದ್ದರು. ಶ್ರೀಗಳ ಅಗಲಿಕೆಯಿಂದ ಗರಗ-ಹಂಗರಕಿ ಸೇರಿದಂತೆ ಇಡೀ ಧಾರವಾಡ ಜಿಲ್ಲೆಯ ಭಕ್ತಗಣ ಶೋಕಸಾಗರದಲ್ಲಿ ಮುಳುಗುವಂತಾಗಿದೆ.

ಧಾರವಾಡ ಶಾಸಕ ಅಮೃತ ದೇಸಾಯಿ ಹಾಗೂ ಶ್ರೀಮಠದ ಕಾರ್ಯಾಧ್ಯಕ್ಷ ಅಶೋಕ ದೇಸಾಯಿ, ಹಿರಿಯ ಭಕ್ತ ದಯಾನಂದ ಪಾಟೀಲ ಮತ್ತು ಗರಗ-ಹಂಗರಕಿ ಗ್ರಾಮದ ಸದ್ಭಕ್ತರ ನೇತೃತ್ವದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಮಧ್ಯಾಹ್ನ 12.30 ರಿಂದ ನಾಳೆ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಎಲ್ಲ ಭಕ್ತರಿಗೆ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ನಾಳೆ ಸೋಮವಾರ ಬೆಳಿಗ್ಗೆ 7.30ಕ್ಕೆ ಶ್ರೀಗಳ ಅಂತಿಮಯಾತ್ರೆಯ ಮೆರವಣಿಗೆ ಹಂಗರಕಿ ಗ್ರಾಮದಿಂದ ಹೊರಟು, ಗರಗ ಗ್ರಾಮದಲ್ಲಿ ಸಂಚರಿಸಲಿದೆ. ನಂತರ ಶ್ರೀಮಠದ ಆವರಣದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗಲಿದೆ. ಗರಗ-ಹಂಗರಕಿ ಗ್ರಾಮದ ಸದ್ಭಕ್ತರು ಗುರು-ಹಿರಿಯರು ಹಾಗೂ ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಉಸ್ತುವಾರಿ ವಹಿಸಿದ್ದಾರೆ.

Share News

About BigTv News

Check Also

ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಖೈದಿ

ಹುಬ್ಬಳ್ಳಿ: ಕಲಬುರ್ಗಿಯಿಂದ ಗಡಿಪಾರು ಆದೇಶದಲ್ಲಿದ್ದ ಆರೋಪಿತ ಮೌನುದ್ದೀನ್ ಲಾಲ್‌ಸಾಬ (47) ಎಂಬ ವ್ಯಕ್ತಿ ಹೊಟ್ಟೆ ನೋವು ನೆಪ ಹೇಳಿ ಪೊಲೀಸರಿಂದ …

Leave a Reply

Your email address will not be published. Required fields are marked *

You cannot copy content of this page