ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಸತ್ಯಾಗ್ರಹದಲ್ಲಿ ಪಾಲ್ಗೊಂಡರು.