ಹುಬ್ಬಳ್ಳಿ :ವಿರೋಧ ಪಕ್ಷದ ನಾಯಕರ ಮೇಲೆ ಇನ್ನೂ ಎರಡು ತಿಂಗಳು ಐಟಿ ದಾಳಿ ಸಾಮಾನ್ಯ. ಇದು ಯಾಕೆ ಅಂತಲೂ ಎಲ್ಲರಿಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.ಹುಬ್ಬಳ್ಳಿ ತಾಲೂಕಿನ ಹೆಬಸೂರನಲ್ಲಿ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಭಾಕರ್ ರೆಡ್ಡಿ ಒಬ್ಬ ಉದ್ಯಮಿ ಇದ್ದಾರೆ. ಇಂತಹ ಐಟಿ ದಾಳಿ ಸಾಮಾನ್ಯ ಅದು ಯಾಕೆ ಅಂತ ಗೊತ್ತು. ಇನ್ನೂ ಎರಡು ಮೂರು ತಿಂಗಳು ಇಂತಹ ಐಟಿ ದಾಳಿಗಳು ವಿರೋಧ ಪಕ್ಷದ ಮೇಲೆ ನಡೆಯುತ್ತವೆ. ಇದು ಯಾಕೆ ಅಂತ ಎಲ್ಲರಿಗೂ ಗೊತ್ತು ಈ ಬಗ್ಗೆ ಜಾಸ್ತಿ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಧಾನ ಸಭಾ ಕಲಾಪದಲ್ಲಿ ಚರ್ಚೆ ತೌಡು ಕುಟ್ಟುವ ಕೆಲಸವಾಗುತ್ತಿದೆ. ಚರ್ಚೆ ಯಿಂದ ಏನು ಸಾಧ್ಯಯಿಲ್ಲ. ಎಲ್ಲಾ ಭ್ರಷ್ಟಾಚಾರ ಆರೋಪಗಳಿಗೆ ದಾಖಲೆ ಒದಗಿಸಲು ಸಾಧ್ಯವಿಲ್ಲ.ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತೆ. ಬಿಜೆಪಿಯವರು ಅವರ ಆತ್ಮ ಸಾಕ್ಷಿ ಗೆ ಉತ್ತರ ಕೊಡಬೇಕು.ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಸಾಮಾನ್ಯ. ಇದಕ್ಕೆ ದಾಖಲೆ ನೀಡಲ್ಲ. ನಾನು ಈ ಹಿಂದೆ ಭ್ರಷ್ಟಾಚಾರದ ಆರೋಪಗಳಿಗೆ ದಾಖಲೆ ನೀಡಿದ್ದೆ . ಆದರೆ ಆ ದಾಖಲೆಗಳಿಂದಕಾಂಗ್ರೆಸ್ ಅನುಕೂಲ ಮಾಡಿಕೊಂಡಿತು. ಕಾಂಗ್ರೆಸ್ ನಂಬಿದ್ರೆ ಅಕ್ಕಿನೂ ಸಿಗಲ್ಲ ಹಕ್ಕಿನೂ ಸಿಗಲ್ಲ. ಜನಾರ್ದನ ರೆಡ್ಡಿಯವರ ಪ್ರಾದೇಶಿಕ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿಗೆ ಹೊಡೆತ ನೀಡಬಹುದು ಆದರೆ ಕೆಪಿಪಿಯಿಂದ ಜೆಡಿಎಸ್ ಗೆ ಏನು ಆಗಲ್ಲ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




