ಹುಬ್ಬಳ್ಳಿ:ಅಖಿಲ ಕರ್ನಾಟಕ ವಿಪ್ರ ಅಡುಗೆದಾರರ ರಾಜ್ಯ ಮಟ್ಟದ ಪ್ರಥಮ ಸಮಾವೇಶ ಕಾರ್ಯಕ್ರಮವನ್ನು ಫೆ.೨೬ ಹಾಗೂ ೨೭ ರಂದು ಕಲಬುರಗಿ ಜಿಲ್ಲೆಯ ಜೀವರ್ಗಿ ರಸ್ತೆಯ ಹಳೇ ಕೋಠಾರಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಗುರುರಾಜ್ ಚಳ್ಳಾರಿ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ವಿಪ್ರ ಅಡುಗೆದಾರರು ಹಾಗೂ ಅಡುಗೆ ಸಹಾಯಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಡುಗೆ ಮಾಡುವವರು ಮತ್ತು ಬಡಿಸುವವರ ಸಂಘ ಕಲಬುರಗಿ ಇವರ ಸಹಭಾಗಿತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
ಫೆ. ೨೬ ರ ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಅನಿಲ ಅಷ್ಟಗಿ ಹಾಗೂ ಉದ್ಘಾಟನೆಯನ್ನು ಮಾಡಲಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಂಗನಾಥ ದೇಸಾಯಿ, ಅಧ್ಯಕ್ಷತೆಯನ್ನು ಹೆಚ್.ಕೆ.ಬಳ್ಳಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಾರಾಯಣರಾವ್ ಕುಲಕರ್ಣಿ ಸೇರಿದಂತೆ ಇತರರು ಉಪಸ್ಥಿತರಿರಲಿದ್ದಾರೆ. ಇನ್ನೂ ಅಂದು ರಾತ್ರಿ ೯.೩೦ ರ ಕ್ಕೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಫೆ. ೨೭ ರಂದು ಬೆ. ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ಕುಂಕಮಾರ್ಚನೆ ಹಾಗೂ ಮಾತಾ ಅನ್ನಪೂರ್ಣೇಶ್ವರಿಯ ಶ್ರೀ ಸುಕ್ತ ಹೋಮ ಹಾಗೂ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಆಗಮ್ಯ ಚೇತನ ಅಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷ ಗುರುರಾಜ್ ಚಳ್ಳಾರಿ, ಮುಖ್ಯ ಅತಿಥಿಗಳಾಗಿ ಸಚಿವರಾದ ಶಿವರಾಮ್ ಹೆಬ್ಬಾರ,ಮುರುಗೇಶ ನಿರಾಣಿ, ಕಲಬುರಗಿ ಸಂಸದರಾದ ಉಮೇಶ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಸಿ. ಸಚ್ಚಿದಾನಂದ ಮೂರ್ತಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆಂದರು ಎಂದರು.
ಪತ್ರಿಕಾಗೋಷ್ಠಿಯಲ್ಲಿ
ಕಲ್ಯಾಣ ಜೋಶಿ, ಗಿರೀಶ ಭಾದರಿ, ಕಿಶನರಾವ್ ಕುಲಕರ್ಣಿ, ಶ್ರೀನಿವಾಸ ಪಾಟೀಲ್, ಪ್ರವೀಣ ಕುಲಕರ್ಣಿ, ವಾದೀರಾಜ್ ಉಪಸ್ಥಿತರಿದ್ದರು.