Breaking News

ಈಜಲು ಹೋದ ಯುವಕನ ಸಾವು

ಕಲಘಟಗಿ ಪಟ್ಟಣದ ಬೆಂಡಿಗೇರಿ ನಿವಾಸಿಯಾಗಿದ್ದ ಪವನ ನಾರಾಯಣಕರ 19 ವರ್ಷದ ಯುವಕ ಮಡಕಿಹೋನ್ನಳ್ಳಿ ಗ್ರಾಮದ ಸಮೀಪವಿರುವ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈಜಲು ಹೋಗಿ ಸಾವನ್ನಿಪ್ಪಿರುವ ಘಟನೆ ನಡೆದಿದೆ, ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು,ಇಂದು ಮುಂಜಾನೆ ಮೃತದೇಹ ಸಿಕ್ಕಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನಾಗುವ ಆಸೆ ಹೊತ್ತಿದ್ದ ಯುವಕ ಕೆಲವು ತಿಂಗಳ ಹಿಂದೆ ಮಿಲಿಟರಿ ಪರೀಕ್ಷೆಗೆ ಹಾಜರಾಗಿ ಬಂದಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಕಲಘಟಗಿ ಪೋಲಿಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರಿಕ್ಷೆಗೆ ತಾಲೂಕ ಆಸ್ಪತ್ರೆಗೆ ರವಾನಿಸಲಾಗಿದೆ‌.

Share News

About admin

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *