Breaking News

ಶಿವಾಜಿ ಜಯಂತಿ, ಮಹಾಶಿವರಾತ್ರಿ ಆಚರಣೆ ಹಿನ್ನಲೆ ಹುಬ್ಬಳ್ಳಿಯಲ್ಲಿ ಪೊಲೀಸ್ ಫಥಸಂಚಲನ…

ಹುಬ್ಬಳ್ಳಿ: ಛತ್ರಪತಿ ಶಿವಾಜಿ ಜಯಂತಿ, ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹುಬ್ಬಳ್ಳಿಯ ಆಯಕಟ್ಟಿನ ಜಾಗಗಳಲ್ಲಿ ಪಥಸಂಚಲನ ಮಾಡುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ

ಮೂಡಿಸಲಾಯಿತು.ಹೌದು… ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿನ ಹುಬ್ಬಳ್ಳಿಯ ಎಲ್ಲ ಠಾಣೆಯ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಿಂದ ಪಥ ಸಂಚಲನಕ್ಕೆ ಚಾಲನೆ ನೀಡಲಾಯಿತು. ಇನ್ನೂ ಚೆನ್ನಮ್ಮ ವೃತ್ತದಿಂದ ರೈಲ್ವೆ ನಿಲ್ದಾಣ, ಗಣೇಶ ಪೇಟೆ, ಸಿಬಿಟಿ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಪಥಸಂಚಲನ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ಎಸಿಪಿ ಆರ್.ಕೆ.ಪಾಟೀಲ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *