ಧಾರವಾಡ : ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಈ ರೀತಿ ರಸ್ತೆಯಲ್ಲಿ ನಿಂತು ಜಗಳ ಮಾಡುವುದು ಸರಿಯಲ್ಲ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಮಧ್ಯೆ ನಡೆದಿರುವ ಸಮರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಅನಾರೋಗ್ಯಕರ ಬೆಳವಣಿಗೆ. ನಾನು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೇಳುತ್ತೇನೆ. ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಇವರ ಅವರಿಗೆ ಪರಸ್ಪರ ಏನಾದರೂ ದೂರುಗಳಿದ್ದರೆ ಸಕ್ಷಮ ಪ್ರಾಧಿಕಾರಕ್ಕೆ ಕಳುಹಿಸಬೇಕು. ಅದನ್ನು ಬಿಟ್ಟು ರಸ್ತೆಯಲ್ಲಿ ನಿಂತು ಮಾಧ್ಯಮಕ್ಕೆ ಪ್ರತಿಕ್ರಿಯೆ ಕೊಡುವುದು ಫೋಟೋ ಹರಿಬಿಡುವುದು ಸರಿಯಲ್ಲ ಎಂದರು
ನಾವು ಕಾಂಗ್ರೆಸ್‌ನವರ ಮೇಲೆ ಆರೋಪ ಮಾಡುತ್ತೇವೆ. ಕಾಂಗ್ರೆಸ್‌ನವರು ನಮ್ಮ ಮೇಲೆ ಆರೋಪ ಮಾಡುವುದು ಸಹಜ. ಇದು ರಾಜಕೀಯ ವ್ಯವಸ್ಥೆ. ಆದರೆ, ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಕೆಸರೆರಚಾಟ ಮಾಡುವುದು ಸರಿಯಲ್ಲ. ಇಲ್ಲಿ ನಾನು ಯಾವುದೇ ಒಬ್ಬ ಅಧಿಕಾರಿ ಪರ ಮಾತನಾಡುತ್ತಿಲ್ಲ. ಈ ಸೋಷಿಯಲ್ ಮೀಡಿಯಾ ವಾರ್ ಅತ್ಯಂತ ದುರ್ದೈವದ ಸಂಗತಿ. ಆಗಾಗ ರಾಜ್ಯದಲ್ಲಿ ಈ ರೀತಿ ಆಗುತ್ತಿದೆ. ಅಧಿಕಾರಿಗಳು ಈ ರೀತಿ ಮಾಡುವುದು ಸರಿಯಲ್ಲ ಎಂದರು.