ಅದಾನಿ ವಿಚಾರ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಎತ್ತಿದ ಪ್ರಶ್ನೆಗಳ ಕುರಿತು ಪ್ರತೀ ರಾಜ್ಯದಲ್ಲಿರುವ ಪ್ರತೀಯೊಬ್ಬ ಸಂಸದ, ಶಾಸಕ, ಎಂಎಲ್’ಸಿಗಳು ಪ್ರಧಾನಿ ಮೋದಿಗೆ ಪತ್ರ ಬರೆಯಬೇಕೆಂದು ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೆಚ್ ಕೆ ಪಾಟೀಲ್ ಅವರು ಮಾತನಾಡಿ, ರಾಹುಲ್ ಗಾಂಧಿಯವರ ಪ್ರಶ್ನೆಗಳ ಕುರಿತು ನೇರವಾಗಿ ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳಲು ಆರಂಭಿಸುತ್ತೇವೆ. ಪ್ರಶ್ನಿಸುವ ನಮ್ಮ ಹಕ್ಕನ್ನು ಕಸಿದುಕೊಳ್ಳಲು ಪ್ರಧಾನಮಂತ್ರಿಗಳಿಗೆ ಅವಕಾಶವಿಲ್ಲ . ಪ್ರಶ್ನೆಗಳನ್ನು ಕೇಳುವ ವ್ಯಕ್ತಿಯನ್ನು ಧಿಕ್ಕರಿಸುವ ಬಿಜೆಪಿಯ ವರ್ತನೆ ಪ್ರಜಾಸತ್ತಾತ್ಮಕವಲ್ಲ. ಅದನ್ನು ಸ್ವೀಕರಿಸಲು ಸಾಧ್ಯವೂ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮಾತನಾಡಿ, ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಕುರಿತು ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
