ಸಿದ್ದರಾಮಯ್ಯ ವಿರುದ್ಧ ವಿಧಾನಸಭೆಯಲ್ಲಿ ಯಡಿಯೂರಪ್ಪ ವಾಗ್ದಾಳಿ. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಗೆಲ್ಲುವ ವಿಶ್ವಾಸ ಇಲ್ಲ. ಹಾಗಾಗಿ ಕ್ಷೇತ್ರ ಹುಡುಕಾಟ ನಡೆಸಿದ್ದಾರೆ ಎಂದ ಯಡಿಯೂರಪ್ಪ. ಎಲ್ಲೇ ನಿಂತರೂ ಗೆಲ್ತೇನೆ ಅಂತಾ ಸಿದ್ದರಾಮಯ್ಯ ಹೇಳುತ್ತಾರೆ. ಹಾಗಿದ್ರೆ ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ಸೋತ್ರು. ಸಿದ್ದರಾಮಯ್ಯ ಮತ್ತೆ ಬಾದಾಮಿ ಕ್ಷೇತ್ರಕ್ಕೆ ಯಾಕೆ ಹೋಗ್ತಿಲ್ಲ ಎಂದು ವ್ಯಂಗವಾಗಿ ಮಾತನಾಡಿದ ಬಿಎಸ್ ಯಡಿಯೂರಪ್ಪ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ. ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ ಹೇಳಿಕೆ.
