ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳಬೇಕೆಂದು ಸಂವಿಧಾನದಲ್ಲಿ ಏನಾದ್ರೂ ಬರೆದಿದೆಯಾ, ಸಂವಿಧಾನದಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅಂತ ಇದೆ. ಆದರೆ ಇವರು ತಿಳಿದುಕೊಂಡಿರೋದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕ್ಕೋಸ್ಕರ ಅನ್ಕೊಂಡಿದ್ದಾರೆ ಅಂತಾ ಮಂಡ್ಯದಲ್ಲಿ ಹೆಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
