ಕುಂದಗೋಳ ತಾಲೂಕಿನ ಬು.ತರ್ಲಘಟ್ಟದಲ್ಲಿ ರೈತನೊರ್ವ ಸಾಲ ಭಾದೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕಂಡುಬಂದಿದೆ.ರೈತ ಫಕ್ಕೀರಯ್ಯ ಗುರುನಂಜಯ್ಯ ಸಂಶಿಮಠ ಸುಮಾರು 5 ಲಕ್ಷ ರೂಪಾಯಿ ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಇಂದು ಬು.ತರ್ಲಘಟ್ಟ ಗ್ರಾಮದ ಹೊರವಲಯದ ಜಮೀನಿನಲ್ಲಿ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಘಟನೆಗೆ ಸಂಬಂಧಿಸಿದಂತೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
