Breaking News

ನಂಬರ್ ಪ್ಲೇಟ್ ಇಲ್ಲದ ಬೈಕ್ ಸವಾರರಿಗೆ ಶಾಕ್

ನಂಬರ್ ಪ್ಲೇಟ್ ಇಲ್ಲದ ಬೈಕ್ ಸೇರಿ ಮಾಡಿಫೈ ಸೈಲೆನ್ಸರ್ ಅಳವಡಿಸಿಕೊಂಡು ಬೇಕ್ಕಾಬಿಟ್ಟಿಯಾಗಿ ತಿರುಗಾಟ ಮಾಡುತ್ತಿದ್ದ ಬೈಕ್ ಸವಾರರ ವಿರುದ್ಧ ಹುಬ್ಬಳ್ಳಿ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಿಸಿಮುಟ್ಟಿಸಿದ್ದಾರೆ. ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ 26 ಬೈಕ್‌, ದಕ್ಷಿಣ ಸಂಚಾರಿ ಠಾಣೆಯಲ್ಲಿ 8 ಬೈಕ್, ಪೂರ್ವ ಸಂಚಾರಿ ಠಾಣೆಯಲ್ಲಿ 7 ಬೈಕ್ ಹಾಗೂ ಧಾರವಾಡ ಸಂಚಾರಿ ಠಾಣೆಯಲ್ಲಿ 9 ದ್ವಿಚಕ್ರ ವಾಹಮ ಸೇರಿ ಒಟ್ಟು 50 ದೋಷಪೂರಿತ ನಂಬರ್ ಪ್ಲೇಟ್ ಬೈಕ್‌ಗಳನ್ನು ವಶಕ್ಕೆ ಪಡೆದು 24,500 ದಂಡ ವಸೂಲಿ‌ ಮಾಡಿದ್ದಾರೆ. ಇನ್ನೂ ನಾಲ್ಕು ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದ 52 ಬೈಕ್ ಗಳನ್ನು ವಶಕ್ಕೆ ಪಡೆದು 26 ಸಾವಿರ ರೂ ದಂಡ ಹಾಕಿದ್ದಾರೆ. ಸಂಚಾರಿ ಠಾಣೆಯ ಪೊಲೀಸರು ಪುಲ್ ಆ್ಯಕ್ಟೀವ್ ಆಗಿದ್ದು, ದೋಷಪೂರಿತ ಸೈಲೆನ್ಸರ್ ಅಳವಡಿಸಿಕೊಂಡು ನಗರದ ಜನತೆ ಸೇರಿದಂತೆ ಅಕ್ಕಪಕ್ಕದ ವಾಹನ ಸವಾರರಿಗೆ ತೊಂದರೆ ನೀಡುತ್ತಿದ್ದ 9 ಬೈಕ್‌ಗಳನ್ನು ನಾಲ್ಕು ಠಾಣೆಯ ಪೊಲೀಸರುವಶಕ್ಕೆ ಪಡೆದುಕೊಂಡು 3 ಸಾವಿರ ರೂ ದಂಡ ವಿಧಿಸಿ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಒಟ್ಟಿನಲ್ಲಿ ನಗರದಲ್ಲಿ ಸಂಜೆ ನಂತರ ಮಾಡಿಫೈ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಬೈಕ್ ಸವಾರರಿಗೆ ಶಾಕ್ ನೀಡಿದ್ದಾರೆ.

Share News

About admin

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *