ಮಾಜಿ ಸಿಎಂ ಯಡಿಯೂರಪ್ಪನವರು ಚುನಾವಣೆಯಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದು, ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ತಮ್ಮ ವಿದಾಯದ ಭಾಷಣ ಮಾಡಿದ್ದಾರೆ. ಬಿಎಸ್ವೈಗೆ ವಯಸ್ಸಾಗಿದೆ ಎಂದು ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿದ್ರು. ಅದಕ್ಕಾಗಿ ಅವರು ವಿದಾಯದ ಭಾಷಣ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಯಡಿಯೂರಪ್ಪನವರಿಗೆ ನನ್ನ ಮೇಲೆ ಪ್ರೀತಿ ಇದೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ. ಇದೇ ಕಾರಣಕ್ಕೆ ಬಿಎಸ್ವೈ ಬಾದಾಮಿಯಿಂದ ಸ್ಪರ್ಧಿಸಲಿ, ಎಂದು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದರು . ನಾನು ಎಲ್ಲಿ ಸ್ಪರ್ಧಿಸಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಯಡಿಯೂರಪ್ಪ ಹೇಳಿದ ಹಾಗೆ ನಿಲ್ಲುವುದಕ್ಕೆ ಆಗುವುದಿಲ್ಲ. ಅವರ್ಯಾರು ನನ್ನ ಸ್ಪರ್ಧೆ ನಿರ್ಧಾರ ಮಾಡೋಕೆ? ಎಂದು ಯಡಿಯೂರಪ್ಪ ವಿರುದ್ಧ ಆಕ್ರೋಶದಿದಂದಾ ಮಾತನಾಡಿದರು . ನಂತರ ಮಾಜಿ ಸಚಿವ ಎಂ.ಬಿ.ಪಾಟೀಲ್, ಜಮೀರ್ ಅಹಮ್ಮದ್ ಖಾನ್ ಜೋತೆ ದೇವರಹಿಪ್ಪರಗಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ತೆರಳಿದರು .
