ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಗೆ ಡಿಕ್ಕಿ ಹೊಡೆದ ನಂತರ ಕಾರು ಪಾದಚಾರಿಯೊಬ್ಬರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಆ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮೃತಪಟ್ಟವರು ಯಾರು, ಎಲ್ಲಿಯವರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದ್ದು, ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

