ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯದ ಜನರು ಭೂಮಿ ನೀಡಿದ್ದಾರೆ. ಇನ್ನೂ ಕೆಲವರಿಗೆ ಹಣ ಬಂದಿಲ್ಲ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು? ಎಂದು ಪ್ರಶ್ನಿಸಿದರು, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ಹೇಳಿದ, ಎಚ್ ಡಿಕುಮಾರಸ್ವಾಮಿ ಬಿಜೆಪಿ ವಿರುದ್ಧ ಕೀಡಿ ಕಾರಿದರು. ಮಾರ್ಚ್ 11ರಂದು ಮತ್ತೇ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಮೋದಿ ಬರಲಿದ್ದಾರೆ. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಅವರು ಬರುತ್ತಿದ್ದಾರೆ ಎಂದು ಶೃಂಗೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
