ಹುಬ್ಬಳ್ಳಿ: ‘ಸರ್ವರಿಗೂ ಉದ್ಯೋಗ’ ಎಂಬ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ನಗರದ ವಿದ್ಯಾನಗರದ ಸಿ.ಐ. ಮುನವಳ್ಳಿ ಪಾಲಿಟೆಕ್ನಿಕ್ ನ ಬಿ.ವಿ.ಬಿ ಕ್ಯಾಂಪಸ್ ನಲ್ಲಿ ಫೆ. ೨೮ ರಂದು ಬೆ. ೯ ಗಂಟೆಗೆ ಆಯೋಜಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ. ಚಂದ್ರಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್ ಧಾರವಾಡ, ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಹಾಗೂ ಶ್ರೀಮತಿ ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್ ಹುಬ್ಬಳ್ಳಿ ಇವರ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು. ಉದ್ಯೋಗ ಮೇಳ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅಧ್ಯಕ್ಷತೆಯನ್ನು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ ವಹಿಸಲಿದ್ದಾರೆ. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ. ಚಂದ್ರಪ್ಪ, ಧಾರವಾಡ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೋ. ಕೃಷ್ಣಮೂರ್ತಿ ಬಿ.ಆರ್, ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಭೀಮಪ್ಪ ಎನ್.ಎಮ್, ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ರವೀಂದ್ರ ದ್ಯಾಬೇರಿ, ಹುಬ್ಬಳ್ಳಿ ಸರ್ಕಾರಿ ಐಟಿಐ ಪ್ರಾಶುಂಪಾಲರಾದ ನಾಗರತ್ನ ಕೋಟೂರ, ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ವಿರೇಶ ಅಂಗಡಿ ಉಪಸ್ಥಿತರಿರಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಸಿ.ಐ.ಮುನವಳ್ಳಿ ಪಾಲಿಟೆಕ್ನಿಕ್ ಪ್ರಾಂಶುಪಾಲ ವೀರೇಶ ಅಂಗಡಿ, ಸಹಾಯಕ ನಿರ್ದೇಶಕ ರವಿ. ಎ.ಎನ್, ಸಹಾಯಕ ಸಾಂಖ್ಯಿಕ ಅಧಿಕಾರಿ ಎ.ಎಮ್.ಶೆಟ್ಟರ್ ಉಪಸ್ಥಿತರಿದ್ದರು.
