ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪಾ ಅವರು, ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಮೋದಿಯವರು ಬರುತ್ತಿದ್ದಾರೆ.ನನ್ನ ಬಹಳ ವರ್ಷದ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಮಾಡಬೇಕೋ ಅದನ್ನೆಲ್ಲ ಮಾಡಿದ್ದೇನೆಂಬ ತೃಪ್ತಿ ಇದೆ. 27 ನೇ ತಾರೀಖು ನನಗೆ 80 ವರ್ಷ ಆಗುತ್ತಿದೆ. ಹೀಗಾಗಿ ನಾನೇ ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುತ್ತಿದ್ದೇನೆ. ಹೀಗಾಗಿ ವೀರಶೈವ ಬಂಧುಗಳು ಅಪಾರ್ಥ ಮಾಡಿಕೊಳ್ಳಬಾರದು. ಈ ಮೊದಲಿದ್ದಂತೆ ಸಮುದಾಯದ ಜನ ಬಿಜೆಪಿಗೆ ಬೆಂಬಲಿಸಬೇಕು. ವೀರಶೈವ ಲಿಂಗಾಯತ ಬಂಧುಗಳಲ್ಲಿ ಕೈ ಜೋಡಿಸಿ ಮನವಿ ಮಾಡುತ್ತಿದ್ದೇನೆ ನನಗೆ ಬೆಂಬಲ ಕೊಟ್ಟು ಬಿಜೆಪಿಯನ್ನಾ ಗೆಲ್ಲಿಸಿ ಎಂದರು. ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ. ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿಶ್ ಶಾ ಅವರು ನಮಗೆ ಆನೆ ಬಲ ಸಿಕ್ಕಿದಂತಾಗಿದೆ. ಬರುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





