Breaking News

2023-24 ನೇ ಸಾಲಿನಲ್ಲಿಯೇ 7ನೇ ವೇತನ ಆಯೋಗ ಜಾರಿಗೆ -ಸಿಎಂ ಬೊಮ್ಮಾಯಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ಮಧ್ಯಂತರ ವರದಿ ಸಿದ್ಧಪಡಿಸ್ತಾ ಇದೇವೆ, ಮಧ್ಯಂತರ ವರದಿ ಬಂದ ಕೂಡಲೇ 2023-24 ನೇ ಸಾಲಿನಲ್ಲಿಯೇ 7 ನೇ ವೇತನ ಆಯೋಗವನ್ನಾ ಅನುಷ್ಠಾನಕ್ಕೆ ತರ್ತೇವೆ ಎಂದು ಹೇಳಿದರು. ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟರಂತೆ ವರ್ತಿಸ್ತಾರೆ ಅಂದಿದ್ದ
ಸಿದ್ಧರಾಮಯ್ಯ ಹೇಳಿಕೆಗೆ ಬೊಮ್ಮಾಯಿ ಕಿಡಿಕಾರಿದ್ದು, ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ
ಮೋದಿ ಅವರು ಬಂದ ಮೇಲೆ ಸಿಗ್ತಿರೋ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಬೊಮ್ಮಾಯಿ‌ ಪ್ರಶ್ನಿಸಿದರು. ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರ ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸ್ತಾರೆ. ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗ್ತಿದಾರೆ. ನಾವು ಮಾತನಾಡುವಾಗ ಅದರ ಹಿಂದಿರೊ ಕಲ್ಪನೆಯೂ ಇರಬೇಕು. ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ, ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದರು. ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರವಾಗಿ ಮಾತನಾಡಿದ ಅವರು ನಾಲ್ಕು ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ, ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ. ಯಡಿಯೂರಪ್ಪ ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದದ್ದು, ಅವರ ಮಗಳು ಡೈರಿ ಬಿಡುಗಡೆ ಮಾಡೋದು ನನಗೆ ಗೊತ್ತಿಲ್ಲ.
ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗ್ತಿದ್ದೆ ಎಂಬ ಯತ್ನಾಳ್ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದರು.

Share News

About admin

Check Also

Featured Video Play Icon

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಟೆಂಗಿನಕಾಯಿ..!

ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ …

Leave a Reply

Your email address will not be published. Required fields are marked *

You cannot copy content of this page