ವಿಜಯಪುರ: ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದಲ್ಲಿ, ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಒಂದು ಡಿಕ್ಕಿಯಾಗಿದ್ದು, ಪರಿಣಾಮವಾಗಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. KA 28 EW 2760 ನಂಬರಿನ ಬೈಕ್ ಹಿಂದಿನಿಂದ ಡಿಕ್ಕಿಯಾಗಿದೆ. ಅಲ್ಲದೇ, ಘಟನೆಯಲ್ಲಿ ಎರಡು ವಾಹನಗಳು ಜಖಂಗೊಂಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
