ಹುಬ್ಬಳ್ಳಿ: ಕೆಲದಿನಗಳ ಹಿಂದೆ ಹುಬಳ್ಳಿಯ ರೈಲ್ವೇ ಕ್ವಾಟರ್ಸನಲ್ಲಿ ಕಳ್ಳತನದ ಘಟನೆ ಕಂಡುಬಂದಿತ್ತು. ಈ ಘಟನೆಗೆ ಸಂಭಂದಿಸಿದಂತೆ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ತನಿಖೆ ಶುರುವಾಗಿದ್ದು. ಕಳುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿಯನ್ನು ಪತ್ತೆ ಹಚ್ಚುವ ಯಶಸ್ವಿಯಾದ ಪೋಲಿಸ್ ರು ಆರೋಪಿತನಿಂದ 2,20.000/-ರೂ ಬೆಲೆಬಾಳುವ 44 ಗ್ರಾಂ ತೂಕದ ಬಂಗಾರದ ಮತ್ತು,15.000/-ಬೆಲೆಬಾಳುವ 210 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು, ರೂ ಒಟ್ಟು 2,35,000/-ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಶ್ರೀ ಯು.ಎಚ್.ಸಾತೇನಹಳ್ಳಿ ರವರ ನೇತೃತ್ವದ ಅಧಿಕಾರಿ ಮತ್ತು ಸಿಬ್ಬಂದಿ ಜನರ ತಂಡದ ಕಾರ್ಯವೈಖರಿಗೆ ಮಾನ್ಯ ಪೊಲೀಸ್ ಆಯುಕ್ತರು, ಹು-ಧಾ ರವರು ಶ್ಲಾಘನೆ ವ್ಯಕ್ತಪಡಿಸಿರುತ್ತಾರೆ.
