ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆಗೆ ಸಮಾರಂಭಕ್ಕೆ ಜನರ ಸೇರಿಸುವ ಕುರಿತು ಲಕ್ಷ್ಮೀ ಹೆಬ್ಬಾಳ್ಕರ ಅವರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯವರು ಮಾತುಕತೆ ನಡೆಸಿದ್ದು, ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ. ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ. ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವಿಟ್ ಮಾಡುವ ಮೂಲಕ ಟೀಕಿಸಿದೆ.
