Breaking News

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಅಭಿವೃದ್ಧಿಗೆ ಬೈಕ್‌ ವಿತರಣೆ

ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜನೆಗೊಂಡ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಂತರ ಇಬ್ಬರು ಫಲಾನು- ಭವಿಗಳಿಗೆ ಬೈಕ್ ಕೀಲಿ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಏಳು ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್‌ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ವಿತರಣೆ/ಡೆಲಿವರಿ ಕೆಲಸ ಮಾಡುವವರಿಗೆ, ಮನೆ ಮನೆಗೆ ಹಾಲು ಪೂರೈಸುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ನಂತರ ಗಂಗಾಕಲ್ಯಾಣ ಯೋಜನೆಯ ಅನುಷ್ಠಾನದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು 775 ಸಾವಿರವನ್ನು ಫಲಾನುಭವಿ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. 75 ವರ್ಷಗಳ ನಂತರವೂ ಅಂಬೇಡ್ಕರ್ ಕನಸನ್ನು ಎಷ್ಟರಮಟ್ಟಿಗೆ ನನಸು ಮಾಡಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಕಾಲವಿದು. ಮೀಸಲಾತಿ ಮತ್ತು ಅದರ ಲಾಭ ಎಷ್ಟು ಜನರಿಗೆ ತಲುಪಿದೆ ಎಂಬುದರ ಕುರಿತು ಪ್ರತಿ ಹತ್ತು ವರ್ಷಗಳಿಗೊಮ್ಮ ಪುನರ್ ವಿಮರ್ಶೆಯಾಗಬೇಕು ಎಂದು ಹೇಳಿದರು.

Share News

About admin

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *