ಹುಬ್ಬಳ್ಳಿ-ಧಾರವಾಡ: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಾಳೆ ನಡೆಯಲಿರುವ ಹೋಳಿ ಹಬ್ಬದ ನಿಮಿತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಕ್ರಮವಾಗಿ ಅಧೀನ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆ ನೀಡಿ ನಗರದ ಪ್ರಮುಖ ಸ್ಥಳಗಳಲ್ಲಿ ಮಾನ್ಯ ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಪೊಲೀಸ್ ಪಡೆಗಳ ರೂಟ್ ಮಾರ್ಚ ನಡೆಸಲಾಯಿತು. ಪಥಸಂಚಲನದಲ್ಲಿ ಮಾನ್ಯ ಉಪ ಪೊಲೀಸ್ ಆಯುಕ್ತರು ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
